ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ

| Published : Apr 25 2024, 01:10 AM IST

ಸಾರಾಂಶ

ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿವರ್ಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಕೊಲ್ಹಾರ

ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿವರ್ಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ತಾಲೂಕಿನ ಕೂಡಗಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಆಸ್ಪತ್ರೆಗೆ ಬರವ ರೋಗಿಗಳನ್ನು ಸೌಜನ್ಯದಿಂದ ಮಾತನಾಡಿಸಿ, ಉತ್ತಮ ವೈದ್ಯಕೀಯ ಉಪಚಾರಗಳನ್ನು ನೀಡುವ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾಗದಂತೆ ನೋಡಿಕೊಳ್ಳಬೇಕು ಎಂದರು.

ನಂತರ ಆಸ್ಪತ್ರೆಯ ಚುಚ್ಚುವಿಕೆ ಕೊಠಡಿ, ಔಷಧಿ ಸಂಗ್ರಹಣೆ ಕೊಠಡಿ, ಒಳ ರೋಗಿಗಳ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಆಸ್ಪತ್ರೆಯ ಇಲ್ಲಾ ವಿಭಾಗಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯೀಕರಣ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಪ್ರತಿದಿನ ಆಸ್ಪತ್ರೆಯ ಇಲ್ಲಾ ವಿಭಾಗಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅಲ್ಲಿನ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.ಆರೋಗ್ಯ ತಪಾಸಣೆಗಾಗಿ ಬಂದ ಸಾರ್ವಜನಿಕರೊಂದಿಗೆ ಮಾತಾಡಿ ಅವರೊಂದಿಗೆ ಇಲ್ಲಿನ ವೈದ್ಯಕೀಯ ಗುಣಮಟ್ಟ ಯಾವ ತರನಾಗಿ ಇದೆ ಎಂಬುದು ತಿಳಿದುಕೊಂಡು ಬಂದಂತಹ ರೋಗಿಗಳಿಗೆ ಸರಕಾರಿ ಆಸ್ಪತ್ರೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಕೊಳ್ಳಲು ತಿಳಿಸಿದರು.

ತದ ನಂತರ ಶಂಕರನಗರದಲ್ಲಿರುವ 108-109 ವಿಶೇಷ ಮತಗಟ್ಟೆಗಳಿಗೆ ಭೇಟಿ ನೀಡಿ, ಆ ಮತಗಟ್ಟೆಯ ಕಟ್ಟಡ ದುರಸ್ತಿ, ನೀರಿನ ಸೌಲಭ್ಯ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೆಕ ಶೌಚಾಲಯ , ರ್‍ಯಾಂಪ್, ಇಲೆಕ್ಟ್ರಸಿಟಿಗಳನ್ನು ಪರಿಶೀಲಿಸಿದರು. ನಂತರ ಸರಕಾರಿ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಣೆಗೆ ಭೇಟಿ ಮಾಡಿ ಮಕ್ಕಳಿಗೆ ಸರಿಯಾದ ಪೌಷ್ಟಿಕ ಆಹಾರಗಳ ವಿತರಣೆ ಬಗ್ಗೆ ಪರಿಶೀಲಿಸಿ ಮಕ್ಕಳೊಂದಿಗೆ ಆಹಾರ ನೀಡುತ್ತಿರುವ ಬಗ್ಗೆ ಅವರಿಂದ ತಿಳಿದುಕೊಂಡು ಅಲ್ಲಿನ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ಎಲ್ಲಾ ಮಕ್ಕಳಿಗೆ ಊಟ ಮಾಡಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಹುಕ್ಕೆರಿ, ಜಿಪಂ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಿ.ಪಿ.ಗೊವಿಂದರಾಜು, ಅಶ್ವಿನಿ ತುಂಬರಮಟಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ ಕೊಟ್ಯಾಳ ಹಾಗೂ ತಾಂತ್ರಿಕ ಸಂಯೋಜಕರು ,ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕರು , ಬಿ.ಎಪ್.‌ ಟಿ ಗಳು ಮತ್ತು ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.