ಕುಡಿಯುವ ನೀರು ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಸಮಸ್ಯೆ ಕಂಡುಬಂದಲ್ಲಿ ವಿಳಂಬ ಮಾಡದೆ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಗಳೂರು; ಕುಡಿಯುವ ನೀರು ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಸಮಸ್ಯೆ ಕಂಡುಬಂದಲ್ಲಿ ವಿಳಂಬ ಮಾಡದೆ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಮುಂಚಿತವಾಗಿಯೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಬೇಡಿಕೆ ಬಂದ ತಕ್ಷಣವೇ ನೀರು ಪೂರೈಸಲು ಅನುಕೂಲವಾಗುವಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಿಳಂಬವಿಲ್ಲದೆ ತಕ್ಷಣ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಸೂಚಿಸಿದರು. ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ ಕಟ್ಟಡಗಳನ್ನು ಪರಿಶೀಲಿಸಿ, ಅಗತ್ಯವಿರುವ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.15 ದಿನಕ್ಕೊಮ್ಮೆ ಸಭೆ ನಡೆಸಿ:
ತಾಲೂಕು ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಮಿತಿ ಸಭೆಗಳನ್ನು ಪ್ರತಿ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಸಭೆಯಲ್ಲಿ ಕುಡಿಯುವ ನೀರಿನ ಸರಬರಾಜು ಪರಿಸ್ಥಿತಿ, ಜಾನುವಾರುಗಳಿಗೆ ಮೇವು ಲಭ್ಯತೆ ಹಾಗೂ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವಿಷಯಗಳನ್ನು ಪರಿಶೀಲಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕು ಮಟ್ಟದಲ್ಲಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.ಸಭೆಯಲ್ಲಿ ಬರ ನಿರ್ವಹಣೆ, ಮುಂಗಾರು ಮಳೆಯಿಂದ ಉಂಟಾದ ಹಾನಿ ಹಾಗೂ ಎಂಆಆರ್ಪಿಎಲ್ ಅವಘಡದಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಉಂಟಾದ ಹಾನಿ ಕುರಿತು ಚರ್ಚಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಇದ್ದರು.