ಜವಾಬ್ದಾರಿ ಅರಿತು ಮತದಾನ ಮಾಡಿ

| Published : May 01 2024, 01:21 AM IST

ಸಾರಾಂಶ

ಚುನಾವಣೆಗಳಲ್ಲಿ ಅತೀ ಹೆಚ್ಚು ಪ್ರತಿಶತ ಮತದಾನ ಮಾಡುತ್ತೇವೆ ಎಂದು ಪ್ರತಿಯೊಬ್ಬ ಪ್ರಜೆಯಿಂದ ಸಹಿ ಸಂಗ್ರಹಿಸಿ ಸಹಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ದೇವರ ಹಿಪ್ಪರಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜಿನ್ನುರ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಚುನಾವಣೆಗಳಲ್ಲಿ ಅತೀ ಹೆಚ್ಚು ಪ್ರತಿಶತ ಮತದಾನ ಮಾಡುತ್ತೇವೆ ಎಂದು ಪ್ರತಿಯೊಬ್ಬ ಪ್ರಜೆಯಿಂದ ಸಹಿ ಸಂಗ್ರಹಿಸಿ ಸಹಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ದೇವರ ಹಿಪ್ಪರಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜಿನ್ನುರ ಹೇಳಿದರು.

ತಾಪಂನಲ್ಲಿ ಮಂಗಳವಾರ ಹಮ್ಮಿಕೊಂಡ ಸಹಿ ಅಭಿಯಾನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಪಂ ಸಿಬ್ಬಂದಿ ಮತ್ತು ಗ್ರಾಪಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಿ ಅಭಿಯಾನದಲ್ಲಿ ಭಾಗವಹಿಸಿ ಖಂಡಿತವಾಗಿಯೂ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುತ್ತೇವೆ ಎಂದು ಸಹಿ ಮಾಡುವುದರ ಮೂಲಕ ಖಾತ್ರಿ ಪಡಿಸುವ ಅಭಿಯಾನವೇ ಸಹಿ ಸಂಗ್ರಹ ಅಭಿಯಾನವಾಗಿದೆ. ಪ್ರತಿಯೊಬ್ಬ ಪ್ರಜೆಯೂ ಮತ ಚಲಾಯಿಸುವುದು ನನ್ನ ಜವಾಬ್ದಾರಿ ಎಂದು ಅರಿತು ತಪ್ಪದೇ ಮತದಾನ ಮಾಡಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಸಹಾಯಕ ನಿರ್ದೇಶಕ (ಪಂ.ರಾ) ಶಿವಾನಂದ ಮೂಲಿಮನಿ ಅವರು ಮಾತನಾಡಿ, ಪ್ರತಿಯೊಬ್ಬ ಪ್ರಜೆ ತನ್ನ ಮತವನ್ನು ಚಲಾಯಿಸಿದಾಗ ಮಾತ್ರ ಸದೃಢ ಪ್ರಜಾಪ್ರಭುತ್ವ ನಿರ್ಮಾಣವಾಗುತ್ತದೆ. ಯಾವುದೇ ಆಸೆ-ಆಮಿಷಗಳಿಗೆ ಬಲಿಯಾಗದೇ ತಮ್ಮ ಅಮೂಲ್ಯ ಮತವನ್ನು ಸಮಾಜದ ಒಳಿತಿಗಾಗಿ ಶ್ರಮಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ತಾಲೂಕು ಲೆಕ್ಕಾಧಿಕಾರಿ ಮಹೇಶ ಬಗಲಿ, ಐ.ಇ.ಸಿ ಸಂಯೋಜಕ ಸಿದ್ದು ಕಾಂಬಳೆ, ತಾಲೂಕು ಎಂ.ಐ.ಎಸ್ ಸಂಯೋಜಕ ಆದಣ್ಣ ಹೊಸಮನಿ, ವಿಷಯ ನಿರ್ವಾಹಕ ಜಿ.ಎಸ್.ರೋಡಗಿ, ಗಣಕಯಂತ್ರ ನಿರ್ವಾಹಕ ಕಿರಣ ಪಾಟೀಲ, ಆಡಳಿತ ಸಹಾಯಕ ಭೀಮರಾಯ ಭಾವಿಕಟ್ಟಿ, ಪಿಡಿಒಗಳಾದ ಎಂ.ಎನ್.ಕತ್ತಿ, ಶಿವಾನಂದ ಹಡಪದ, ಶಿವಯೋಗಿ ಹೊಸಮನಿ, ಭಾರತಿ ಮನಗೂಳಿ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.