ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರನಾನು ನನ್ನ ದೇಶ, ನನ್ನ ಗ್ರಾಮ ಎಂಬ ಹೆಮ್ಮೆ ಪ್ರತಿಯೊಬ್ಬರಲ್ಲೂ ಮೂಡಿ ನಗರ ಮತ್ತು ಗ್ರಾಮೀಣ ಭಾಗದ ಸ್ವಚ್ಛತೆಗೆ ಬದ್ಧರಾಗಿ ವಿಶ್ವ ಶೌಚಾಲಯ ದಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಅಧಿಕಾರಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಅಂದದ ಶೌಚಾಲಯ, ಆನಂದದ ಜೀವನ ಎಂಬ ಘೋಷವಾಕ್ಯದಡಿ ನ.೧೯ರಿಂದ ಡಿ.೧೨ರವರೆಗೆ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪಾತ್ರ ಬಹುಮುಖ್ಯವಾಗಿದ್ದು, ಅಂಗನವಾಡಿಗಳಲ್ಲಿ ಶೌಚಾಲಯದ ಪ್ರಸ್ತುತ ವ್ಯವಸ್ಥೆ ಹಾಗೂ ಪರಿಸರ ಸ್ನೇಹಿ ಶೌಚಾಲಯಗಳ ನಿರ್ಮಾಣ, ಅಂಗನವಾಡಿ, ಶಾಲಾ-ಕಾಲೇಜುಗಳ ಸುತ್ತ ೫ ಮೀಟರ್ ದೂರದವರೆಗೆ ಸ್ವಚ್ಛತೆಯನ್ನು ಕಾಪಾಡುವುದು ಸೇರಿ ಎಲ್ಲ ಕಚೇರಿಗಳಲ್ಲಿ ನಿತ್ಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಲಾಯಿತು.ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನಿರಂತರವಾಗಿ ನಮ್ಮ ಶೌಚಾಲಯ, ನಮ್ಮ ಗೌರವ ಎಂಬ ಶಿರ್ಷಿಕೆ ಹಾಗೂ ಅಂದದ ಶೌಚಾಲಯ, ಆನಂದದ ಜೀವನ ಎಂಬ ಘೋಷವಾಕ್ಯದಡಿ ಆಂದೋಲನವನ್ನು ಆಯೋಜನೆ ಮಾಡುವಂತೆ ಸೂಚಿಸಿದರು.ಪರಿಸರ ಸ್ವಚ್ಛತೆಯಿಂದ ಇದ್ದರೆ ಮಾತ್ರ ನಾವು ಆರೋಗ್ಯವಂತರಾಗಿ ಇರಲು ಸಾಧ್ಯ. ಆದ್ದರಿಂದ, ಉತ್ತಮ ಆರೋಗ್ಯಕ್ಕಾಗಿ ಉತ್ತಮ ಸ್ವಚ್ಛತೆ ನಿರ್ವಹಣೆ ಮಾಡಬೇಕು. ಒಂದೇ ಜಾಗದಲ್ಲಿ ನೀರು ನಿಲ್ಲದಂತೆ, ಬ್ಯಾಕ್ಟೀರಿಯಾಗಳು ಉತ್ಪಾದನೆಯಾಗದಂತೆ ನೋಡಿಕೊಳ್ಳಬೇಕು. ಸ್ವಚ್ಛತೆ ಮತ್ತು ಆರೋಗ್ಯದ ಕಡೆ ಹೆಚ್ಚಿನ ಆದ್ಯತೆ ಕೊಡಬೇಕು. ಶೌಚಾಲಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಶೌಚಾಲಯವಿಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ, ಸಹಾಯಧನದಿಂದ ಶೌಚಾಲಯ ಕಟ್ಟಿಸಿ, ನಿಮ್ಮ ಮನೆಯ ಸುತ್ತ-ಮುತ್ತ ನೈರ್ಮಲ್ಯ ಇಟ್ಟುಕೊಳ್ಳಬೇಕು. ಮಲೇರಿಯಾ, ಡೆಂಘ್ಯೀ ಹಾಗೂ ಇತರೆ ಸಮಸ್ಯೆ ಆಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ(ಡಿ.ಆರ್.ಡಿ.ಎ ಕೋಶ) ಬಿ.ಎಸ್.ರಾಠೋಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಡಿಎಚ್‌ಒ ಸಂಪತ್ ಗುಣಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ, ಸಣ್ಣ ನೀರಾವರಿ ಇಲಾಖೆಯ ಕಿರಿಯ ಅಭಿಯಂತರರಾದ ಎಸ್.ಎಂ.ದೇಸಾಯಿ, ಜಿಲ್ಲಾ ಪಂಚಾಯತಿಯ ಎಸ್‌ಬಿಎಂ ಸಮಾಲೋಚಕರು ಉಪಸ್ಥಿತರಿದ್ದರು.