ಸಾರಾಂಶ
ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ದೇಶದ ಹಿತಕ್ಕಾಗಿ ಕೆಲಸ ಮಾಡಲು ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಬೇಕಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ದೇಶದ ಹಿತಕ್ಕಾಗಿ ಕೆಲಸ ಮಾಡಲು ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಬೇಕಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು 17 ವಾರ್ಡ್‌ಗಳಲ್ಲಿ ಸದಸ್ಯರ ನೋಂದಣಿ ಕಾರ್ಯಕ್ಕೆ ಮುಂದಾಗಬೇಕು. ಈಗಾಗಲೇ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಸದಸ್ಯರ ನೋಂದಣಿ ಭರದಿಂದ ಸಾಗಿದೆ ಎಂದು ತಿಳಿಸಿದರು.ಮಂಡಲದ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸುವ ಕಾರ್ಯಾವಾಗಬೇಕಾಗಿದೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರನ್ನು ನೋಂದಣಿ ಮಾಡಿಕೊಳ್ಳಲು ಕಾರ್ಯಕರ್ತರ ಪಡೆ ಸಜ್ಜಾಗಿದೆ. ಸಾರ್ವಜನಿಕರು ಲಿಂಕ್ ಮೂಲಕ ಪಕ್ಷದ ಸದಸ್ಯತ್ವ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷರು ಹಾಗೂ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಿಬಿನಾಳ, ಖಜಾಂಚಿಯಾದ ಸೋಮು ಹಿರೇಮಠ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮಹಾಂತೇಶ ಬಿರಾದಾರ, ಪ್ರಕಾಶ ದೊಡಮನಿ, ಮುಖಂಡರಾದ ಭೀಮನಗೌಡ ಲಚ್ಯಾಣ, ಕಾಶಿನಾಥ ಕಡ್ಲೇವಾಡ, ಸೋಮು ದೇವೂರ, ಮಲ್ಕು ಬಾಗೇವಾಡಿ, ಮುತ್ತುರಾಜ ಹಾಲಿಹಾಳ, ಸುಧಾಕರ ಅಂಗಡಿ, ಕಿರಣ್ ಬುದ್ಧಿ, ಶ್ರೀಶೈಲ ಯಂಭತ್ನಾಳ, ಎಲ್ಲು ಬಾವೂರ, ಪಿಂಟು ಬಾಸುತ್ಕರ್, ಮಲ್ಲನಗೌಡ ಬಿರಾದಾರ, ವಿನೋದ ಚವ್ಹಾಣ, ಸಿದ್ರಾಮಯ್ಯ ಮಠ, ಸಂಜೀವ ಹರವಾಳ, ಭೀಮನಗೌಡ ರಾಯರೆಡ್ಡಿ, ಮಾಂತೇಶ ಬೇವೂರ, ರಮೇಶ ಇಳಗೇರ, ಸದ್ದಾಂ, ಮಲ್ಲು ಕೋಲಕಾರ ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.