ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಪಟ್ಟಣದ ಕುರುಬರ ಬೀದಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ನೂತನ ಆಲಯ ಪ್ರವೇಶ, ದೇವತಾ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭ ಫೆ.17ರಿಂದ 19ರ ವರೆಗೆ ನಡೆಯಲಿದೆ ಎಂದು ಬೀರಲಿಂಗೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಕೆ.ಎಚ್.ಮಹೇಶ್ವರಪ್ಪ ತಿಳಿಸಿದ್ದಾರೆ.ಫೆ.17ರ (ಶನಿವಾರ) ಗೋಧೂಳಿ ಲಗ್ನದಲ್ಲಿ ದೀಪಾರಾಧನೆ, ಗಣಪತಿ ಆರಾಧನೆ, ಸಭಾ ಪ್ರಾರ್ಥನೆ, ಪುಣ್ಯಾಹವಾಚನ, ಮಹಾಸಂಕಲ್ಫ, ಸ್ವಸ್ತಿವಾಚನ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 18ರಂದು ಪ್ರಾತಕಾಲ ಗಂಗಾಪೂಜೆ ನಂತರ 108 ಕುಂಭಗಳೊಂದಿಗೆ ಯಾಗಶಾಲೆ ಪ್ರವೇಶ, ಗೋಪೂಜೆ, ಕಳಶ ಸ್ಥಾಪನೆ, ಶ್ರೀ ಬೀರಲಿಂಗೇಶ್ವರ ಹಾಗೂ ವಿವಿಧೆಡೆಗಳಿಂದ ಆಗಮಿಸಲಿರುವ ದೇವತಾಮೂರ್ತಿಗಳ ಪಲ್ಲಕ್ಕಿಯಲ್ಲಿ ಕೂರಿಸಿ ಪಟ್ಟಣದ ಶ್ರೀ ಕೆರೆಏರಿ ಚೌಡೇಶ್ವರಿ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವಾಲಯಕ್ಕೆ ಕರೆತರಲಾಗುವುದು.
ಸಂಜೆ 7 ರಿಂದ ಧಾರ್ಮಿಕ ಸಮಾರಂಭದ ಸಾನ್ನಿಧ್ಯವನ್ನು ಹೊಸದುರ್ಗ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಚನ್ನಗಿರಿ ಹಾಲಸ್ವಾಮಿ ವಿರಕ್ತ ಮಠದ ಬಸವ ಜಯಚಂದ್ರ ಸ್ವಾಮೀಜಿ, ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಸ್ವಾಮೀಜಿ, ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ ಇತರರು ಭಾಗವಹಿಸಲಿದ್ದಾರೆ.19ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ, ಬೆಳಿಗ್ಗೆ 11.30ರಿಂದ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಅಧ್ಯಕ್ಷತೆ ಶಾಸಕ ಬಸವರಾಜ ಶಿವಗಂಗಾ ವಹಿಸುವರು ಹಾಗೂ ಸ್ವಾಮೀಜಿಗಳು, ಗಣ್ಯರು ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ.ಸಿದ್ದೇಶ್ವರ್, ಜಿಲ್ಲಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.