ಸಾರಾಂಶ
ಸ್ವಾತಂತ್ರ್ಯ ಮುನ್ನಾದಿನ ಬುಧವಾರ ಅಹೋರಾತ್ರಿ ಧರಣಿ ನಡೆಸಲಾಯಿತು. ಅನೇಕ ಮುಖಂಡರು ಭಾಗವಹಿಸಿದ್ದರು. ಕ್ರಾಂತಿ ಗೀತೆ ಹಾಡಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಸಿಐಟಿಯು, ಕೃಷಿ ಕೂಲಿಕಾರರ ಸಂಘ, ರೈತ ಸಂಘಗಳ ಜಂಟಿ ಸಹಯೋಗದಲ್ಲಿ ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ, ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸುವ ಸಲುವಾಗಿ, ಸ್ವಾತಂತ್ರ್ಯ ಮುನ್ನಾ ದಿನವಾದ ಬುಧವಾರ ಅಹೋರಾತ್ರಿ ಧರಣಿ ನಡೆಸಲಾಯಿತು.ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯದ ಕಾರ್ಯಕ್ರಮ ಉದ್ಘಾಟನೆಯನ್ನು ಉಡುಪಿಯ ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ. ಪಿ. ವಿ. ಭಂಡಾರಿ ನೆರವೇರಿಸಿ ಮಾತನಾಡಿದರು. ದಲಿತ ಸಂಘರ್ಷ ಸಮಿತಿಯ ನಾಯಕರಾದ ಜಯನ್ ಮಲ್ಪೆ, ಸುಂದರ್ ಮಾಸ್ಟರ್, ಸಂಜಿವ ಬಳ್ಕೂರ್, ಇದ್ರೀಸ್ ಹೂಡೆ, ಸಿಐಟಿಯು, ಕೃಷಿ ಕೂಲಿಕಾರರ ಸಂಘ, ರೈತ ಸಂಘ, ಜನವಾದಿ ಮಹಿಳಾ ಸಂಘಟನೆ, ಅಂಗನವಾಡಿ ಸಂಘ, ರಿಕ್ಷಾ ಯೂನಿಯನ್, ಕಟ್ಟಡ ಸಂಘ ಮುಖಂಡರು ಭಾಗವಹಿಸಿದ್ದರು. ದಲಿತ ಸಂಘಟನೆಯಿಂದ ಕ್ರಾಂತಿ ಗೀತೆಗಳನ್ನು ಹಾಡಲಾಯಿತು.
ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಕವಿರಾಜ್ ಎಸ್., ಭಾರತಿ, ಯಶೋಧ, ಎಚ್. ನರಸಿಂಹ, ಕೆ. ಶಂಕರ್, ಸುರೇಶ್ ಕಲ್ಲಾಗಾರ, ಚಂದ್ರಶೇಖರ್, ರಾಮ ಕಾರ್ಕಡ, ಮೊಹನ್, ನಳಿನಿ, ಶಶಿಧರ ಗೊಲ್ಲ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.