ಸಾರಾಂಶ
ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಬೇಗಾನೆ ರಾಮಯ್ಯ (90) ಅವರ ವೈಕುಂಠ ಸಮಾರಾಧನೆ ಭಾನುವಾರ ಶಿವಮೊಗ್ಗದ ಕಾಸ್ಮೋಕ್ಲಬ್ ನಲ್ಲಿ ನಡೆಯಿತು.
ಶಿವಮೊಗ್ಗ: ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಬೇಗಾನೆ ರಾಮಯ್ಯ (90) ಅವರ ವೈಕುಂಠ ಸಮಾರಾಧನೆ ಭಾನುವಾರ ಶಿವಮೊಗ್ಗದ ಕಾಸ್ಮೋಕ್ಲಬ್ ನಲ್ಲಿ ನಡೆಯಿತು. ವೈಕುಂಠ ಸಮಾರಾಧನೆಯಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. ವೈಕುಂಠ ಸಮಾರಾಧನೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ, ಶಾಸಕ ರಾಜುಗೌಡ, ಗೋಪಾಲಕೃಷ್ಣ ಬೇಳೂರು ಭಾಗವಹಿಸಿ, ಬೇಗಾನೆ ರಾಮಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ವೇಳೆ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ , ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ್, ಎಐಸಿಸಿ ಕಾರ್ಯದರ್ಶಿ ಮತ್ತು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ, ಜಿ.ಎಚ್ ಶ್ರೀನಿವಾಸ್, ಮಾಜಿ ವಿಧಾನಪರಿಷತ್ ಸದಸ್ಯ ಗಾಯತ್ರಿ ಶಾಂತೇಗೌಡ ಸೇರಿದಂತೆ ಅನೇಕ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.