ಬಿಜೆಪಿ ಅಭ್ಯರ್ಥಿ ಪರ ಬಿ. ಹರ್ಷವರ್ಧನ್ ಪ್ರಚಾರ

| Published : Apr 12 2024, 01:11 AM IST

ಬಿಜೆಪಿ ಅಭ್ಯರ್ಥಿ ಪರ ಬಿ. ಹರ್ಷವರ್ಧನ್ ಪ್ರಚಾರ
Share this Article
  • FB
  • TW
  • Linkdin
  • Email

ಸಾರಾಂಶ

ನಂಜನಗೂಡು ಕ್ಷೇತ್ರದಾದ್ಯಂತ ಬಿಜೆಪಿ ಪರವಾದ ವಾತಾವರಣವಿದೆ, ನನ್ನ ಅವಧಿಯಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿತ್ತು, ನಗು ಏತನೀರಾವರಿ ಯೋಜನೆ, ಪಟ್ಟಣದ ಎರಡು ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಲೈಟ್ ಹಾಗೂ ಕೆಂಡಗಣ್ಣಸ್ವಾಮಿ ಮಠದ ಬಳಿ ಬಸವೇಶ್ವರರ ಮೂರ್ತಿ ಸ್ಥಾಪನೆಗೆ ಕ್ರಮವಹಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ನಂಜನಗೂಡು

ಪಟ್ಟಣದ ತಮ್ಮಡಗೇರಿ, ಹಳ್ಳದಕೇರಿ, ಪಾಠಶಾಲಾ ಬೀದಿ, ಕಾಯಂಗಡಿ ಬೀದಿಗಳಲ್ಲಿ ಗುರುವಾರ ಮಾಜಿ ಶಾಸಕ ಬಿ. ಹರ್ಷವರ್ಧನ್ ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಎಸ್‌. ಬಾಲರಾಜ್ ಪರವಾಗಿ ಮತಯಾಚಿಸಿದರು.

ಬೆಳಗ್ಗೆ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಪಟ್ಟಣದ ಪ್ರಮುಖ ಬೀದಿಗಳ ಮನೆ-ಮನೆಗಳಿಗೆ ತೆರಳಿ ಮತಯಾಚಿಸಿದರು.

ನಂತರ ಅವರು ಮಾತನಾಡಿ, ನಂಜನಗೂಡು ಕ್ಷೇತ್ರದಾದ್ಯಂತ ಬಿಜೆಪಿ ಪರವಾದ ವಾತಾವರಣವಿದೆ, ನನ್ನ ಅವಧಿಯಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿತ್ತು, ನಗು ಏತನೀರಾವರಿ ಯೋಜನೆ, ಪಟ್ಟಣದ ಎರಡು ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಲೈಟ್ ಹಾಗೂ ಕೆಂಡಗಣ್ಣಸ್ವಾಮಿ ಮಠದ ಬಳಿ ಬಸವೇಶ್ವರರ ಮೂರ್ತಿ ಸ್ಥಾಪನೆಗೆ ಕ್ರಮವಹಿಸಲಾಗಿತ್ತು. ಕೇಂದ್ರ ಸರ್ಕಾರದ 10 ವರ್ಷಗಳ ಸಾಧನೆಯನ್ನು ನಮ್ಮ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚನೆ ಮಾಡುತ್ತಿದ್ದಾರೆ ಎಂದರು.

ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ಕೊಡುತ್ತಿದ್ದಾರೆ, ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ, ಈ ಬಾರಿಯೂ ನಮ್ಮ ಅಭ್ಯರ್ಥಿ ಬಾಲರಾಜ್ ಅವರಿಗೆ ಹೆಚ್ಚಿನ ಲೀಡ್ ನೀಡಲಿದ್ದೇವೆ, ರಾಜ್ಯಾಧ್ಯಕ್ಷ ವಿಜಯೇಂದ್ರ ನಗರಕ್ಕೆ ಭೇಟಿ ಕೊಟ್ಟು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ರಾಜ್ಯ ಕಾಂಪೋಸ್ಟ್ ಅಭಿವೃದ್ದಿ ನಿಗಮ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎನ್.ಆರ್. ಕೃಷ್ಣಪ್ಪಗೌಡ, ಜಿಪಂ ಮಾಜಿ ಸದಸ್ಯ ಸಿ. ಚಿಕ್ಕರಂಗನಾಯಕ, ಬಿಜೆಪಿ ತಾಲೂಕು ಅಧ್ಯಕ್ಷ ಕೆಂಡಗಣ್ಣಪ್ಪ, ನಗರಾಧ್ಯಕ್ಷ ಸಿದ್ದರಾಜು, ಒಬಿಸಿ ಅಧ್ಯಕ್ಷ ಬಾಲಚಂದ್ರು, ನಗರಸಭಾ ಸದಸ್ಯರಾದ ಕಪಿಲೇಶ್, ಮಹೇಶ್‌ ಅತ್ತಿಖಾನೆ, ಎಚ್.ಎಸ್. ಮಹದೇವಸ್ವಾಮಿ, ಮಹದೇವಪ್ರಸಾದ್, ಎಪಿಎಂಸಿ ಮಾಜಿ ಸದಸ್ಯ ಗುರುಸ್ವಾಮಿ, ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ ಗೋವರ್ಧನ್, ಯುವ ಮೊರ್ಚಾ ಜಿಲ್ಲಾ ಕಾರ್ಯದರ್ಶಿ ಮಧುರಾಜ್, ಮುಖಂಡರಾದ ವಿನಯ್‌ ಕುಮಾರ್, ಮಹೇಶ್‌ ಬಾಬು, ಕೃಷ್ಣಂರಾಜು, ಅನಂತು, ಚುನಾವಣಾ ಉಸ್ತುವಾರಿ ಎಸ್ಸಿ ಅಶೋಕ್ ಇದ್ದರು.