ಸಾರಾಂಶ
ಸರ್ಕಾರದ ಮಹತ್ತರವಾದ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ತುಂಬ ಅನುಕೂಲವಾಗಿದೆ.
ಮುಂಡಗೋಡ: ಸರ್ಕಾರದ ಮಹತ್ತರವಾದ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ತುಂಬ ಅನುಕೂಲವಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗ್ಯಾರಂಟಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾರ್ವಜನಿಕರೊಂದಿಗೆ ಉತ್ತಮವಾಗಿ ನಡೆದುಕೊಳ್ಳಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.ಬುಧವಾರ ಇಲ್ಲಿಯ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆ ಬಗ್ಗೆ ತೊಂದರೆ ಹೇಳಿಕೊಂಡು ಬರುವ ಸಾರ್ವಜನಿಕರಿಗೆ ಸ್ಪಂದಿಸಿ ಪರಿಹಾರ ಒದಗಿಸುವ ಕೆಲಸವನ್ನು ಮಾಡಬೇಕೆಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಬಸ್ ಚಾಲಕರು, ನಿರ್ವಾಹಕರು ಮಹಿಳಾ ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಜಿಪಂ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಮುಂಡಗೋಡ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ರಾಜಶೇಖರ ಹಿರೇಮಠ ಉಪಸ್ಥಿತರಿದ್ದರು. ತಾಪಂ ಇಒ ಟಿ.ವೈ. ದಾಸನಕೊಪ್ಪ ಸ್ವಾಗತಿಸಿದರು.
ಮುಂಡಗೋಡ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.