ಸಾಧಕನ ಹಿಂದೆ ಗುರುವಿನ ಪಾತ್ರ ಹಿರಿದು

| Published : Sep 09 2024, 01:38 AM IST

ಸಾರಾಂಶ

ಸೊರಬ ಪಟ್ಟಣದ ನವಚೇತನ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಮಾಜ ಸೇವಕ ರಾಜು ಹಿರಿಯಾವಲಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದು ಸಮಾಜ ಸೇವಕ ರಾಜು ಹಿರಿಯಾವಲಿ ಹೇಳಿದರು.

ಪಟ್ಟಣದ ನವಚೇತನ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಸಾಧಕನ ಹಿಂದೆ ಗುರುವಿನ ಪಾತ್ರವಿರುತ್ತದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಶಿಕ್ಷಕರು ಶಿಕ್ಷಣ ನೀಡುವ ಕಾರ್ಯದಲ್ಲಿ ತೊಡಗಿರುತ್ತಾರೆ. ಅಂತಹ ಶಿಕ್ಷಕರನ್ನು ಗೌರವಿಸುವ ಕೆಲಸ ನಿರಂತವಾಗಿ ನಡೆಯಬೇಕು ಎಂದು ತಿಳಿಸಿದರು.ಸರ್ವಪಲ್ಲಿ ರಾಧಾ ಕೃಷ್ಣನ್ ಅವರು ಅತ್ಯುತ್ತಮ ಶಿಕ್ಷಕರಾಗಿ ಹೊರಹೊಮ್ಮವ ಜತೆಗೆ ರಾಷ್ಟ್ರಪತಿಯಾಗಿ, ತತ್ವಜ್ಞಾನಿಯಾಗಿ ನೀಡಿದ ಕೊಡುಗೆ ಅನನ್ಯ. ಅವರ ಜೀವನ ಸಿದ್ಧಾಂತಗಳು ಪ್ರಸ್ತುತ ಕರ್ತವ್ಯ ಸಲ್ಲಿಸುತ್ತಿರುವ ಶಿಕ್ಷಕರು ಅಳವಡಿಸಿಕೊಂಡಾಗ ಇನ್ನಷ್ಟು ವಿಕಾಸಗೊಳ್ಳಲು ಸಾಧ್ಯ ಎಂದ ಅವರು ಮಕ್ಕಳಲ್ಲಿ ಮೌಲ್ಯಗಳನ್ನು ಬಿತ್ತುವ ಕೆಲಸವಾಗಬೇಕು ಎಂದರು.ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಎಸ್.ಎಂ.ನೀಲೇಶ್ ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಮಾಜ ಸೇವಕ ವೇಣುಗೋಪಾಲ್, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಟಿ.ಉಮೇಶ್ ಮಾತನಾಡಿದರು.

ನವಚೇತನ ಬುದ್ದಿಮಾಂದ್ಯ ಮಕ್ಕಳ ಕ್ಷೇಮಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಜಿ.ಬಿ.ರಾಮಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕ ಕೆ.ಬಿ. ಪುಟ್ಟರಾಜು ಪ್ರಾಸ್ತಾವಿಕ ಮಾತನಾಡಿದರು.

ಮುಖ್ಯ ಶಿಕ್ಷಕ ಎಸ್.ರವೀಂದ್ರ, ಶಿಕ್ಷಕರಾದ ಗಾಯತ್ರಿ ನಾಯ್ಕ್, ಎಚ್.ಆರ್.ಸುವರ್ಣ, ಪಲ್ಲವಿ, ಮಂಗಳಾ ಎಸ್. ಪೂಜಾರ್, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಜಿ.ಗಣಪತಿ, ದುರ್ಗಾ ಪರಮೇಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಕೆರಿಯಪ್ಪ, ಬಸವನಗೌಡ, ತುಳಜಪ್ಪ, ಗಣೇಶ್ ಸೇರಿದಂತೆ ವಿದ್ಯಾರ್ಥಿಗಳು ಇತರರಿದ್ದರು.