ಸಾರಾಂಶ
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಹೆಚ್ಚುವರಿ ಎಸ್ಪಿ ನಾರಾಯಣ ಬರಮಣಿ ಅವರಿಗೆ ಕೈ ಮಾಡಲು ಮುಂದಾದ ಸಿಎಂ ಸಿದ್ದರಾಮಯ್ಯ ವರ್ತನೆ ಖಂಡಿಸಿ ನಾರಾಯಣ ಬರಮಣಿ ಅವರ ಹುಟ್ಟೂರು ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ಗ್ರಾಮಸ್ಥರ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಹೆಚ್ಚುವರಿ ಎಸ್ಪಿ ನಾರಾಯಣ ಬರಮಣಿ ಅವರಿಗೆ ಕೈ ಮಾಡಲು ಮುಂದಾದ ಸಿಎಂ ಸಿದ್ದರಾಮಯ್ಯ ವರ್ತನೆ ಖಂಡಿಸಿ ನಾರಾಯಣ ಬರಮಣಿ ಅವರ ಹುಟ್ಟೂರು ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ಗ್ರಾಮಸ್ಥರ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಸಂಜೆ ಗ್ರಾಮದಲ್ಲಿ ಸೇರಿದ ಗ್ರಾಮಸ್ಥರು ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ಬರುವಂತೆ ಮುಖ್ಯಮಂತ್ರಿಗಳು ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.