ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ. 22 ರಿಂದ ನಡೆಸಲಿರುವ ಜಾತಿ ಸಮೀಕ್ಷೆಯಲ್ಲಿ ಹಿಂದು ಧರ್ಮಕ್ಕೆ ಸೇರಿದ ಉಪಜಾತಿಗಳನ್ನು ಕ್ರೈಸ್ತ ಧರ್ಮದ ಪಟ್ಟಿಯಲ್ಲಿ ತೋರಿಸುವ ದುಸ್ಸಾಹಸಕ್ಕೆ ರಾಜ್ಯ ಸರ್ಕಾರ ಕೈಹಾಕಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಗಂಭೀರ ಆರೋಪ ಮಾಡಿದರು.