ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 16ರಂದು ಪ್ರತಿಭಟನೆರೈತರ ಸಂಪೂರ್ಣ ಸಾಲ ಮನ್ನಾ, ಡಾ.ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ, ಡಿ.16ರಂದು ಸುವರ್ಣಸೌಧ ಎದುರು ಒಂದು ಲಕ್ಷಕ್ಕೂ ಅಧಿಕ ರೈತರೊಂದಿಗೆ ರಾಜ್ಯ ರೈತ ಸಂಘ ಏಕೀಕರಣದಿಂದ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜೇರಿ ಹೇಳಿದರು.