ಪಂಚ ಗ್ಯಾರಂಟಿ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಿಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಗೊಂಡಿವೆ. ಆದರೆ ತಾಂತ್ರಿಕ ದೋಷ, ಜಾಗೃತಿ ಕೊರತೆಯಿಂದ ಕೆಲವು ತಾಲೂಕುಗಳಲ್ಲಿ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆಗಳು ಪಡೆಯುವಲ್ಲಿ ಫಲಾನುಭವಿಗಳು ವಂಚಿತರಾಗುತ್ತಿದ್ದು, ಅಂತವರನ್ನು ಗುರುತಿಸಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು.