ಬೇನಾಡಿ ಪಿಎಚ್‌ಸಿ ವಿಸ್ತರಣೆಗೆ ₹33.50 ಲಕ್ಷ ಅನುದಾನ: ಶಶಿಕಲಾ ಜೊಲ್ಲೆ13 ವರ್ಷಗಳಿಂದ ಶಿಕ್ಷಣ, ಆರೋಗ್ಯ, ಕೃಷಿ, ಅಂಗನವಾಡಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಬೇನಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಲ್ಕೂವರೆ ಎಕರೆ ವಿಶಾಲವಾದ ಪ್ರದೇಶ ಹೊಂದಿದೆ. ಹುನ್ನರಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯಲು ಬರುತ್ತಾರೆ. ಹೀಗಾಗಿ ಕೇಂದ್ರವನ್ನು ವಿಸ್ತರಿಸುವ ಮೂಲಕ ಆಸ್ಪತ್ರೆಯ ಅಭಿವೃದ್ಧಿಗೆ ಬದ್ಧರಿರುವುದಾಗಿ ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು.