ಆತಂಕ ಸೃಷ್ಟಿಸಿರುವ ಕಾಡಾನೆಗಳ ತೆರವಿಗೆ ಶಾಸಕ ವಿಠ್ಠಲ ಹಲಗೇಕರ ಆಗ್ರಹಖಾನಾಪುರ ತಾಲೂಕಿನ ಚಾಪಗಾಂವ, ಜಳಗಾ, ನಂದಗಡ ಹಾಗೂ ಸುತ್ತಲಿನ ಗ್ರಾಮಗಳ ಜಮೀನುಗಳಲ್ಲಿ ಓಡಾಡುತ್ತಿರುವ ಕಾಡಾನೆಗಳನ್ನು ಈ ಕೂಡಲೇ ವಿಶೇಷ ಕಾರ್ಯಪಡೆಯ ಸಹಾಯದಿಂದ ಸ್ಥಳಾಂತರಿಸಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದರು.