ಸ್ವಾತಂತ್ರ‍್ಯ ಬಂದಾಗಿನಿಂದ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಐಗಳಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಿಸಿದ ಬಳಿಕ ಶುಕ್ರವಾರ ರಾತ್ರಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ನೆರಪೀಡಿತ ಜಿಲ್ಲೆಗಳಿಗೆ ಖುದ್ದು ಪ್ರವಾಸ ಮಾಡಿ ವಾಸ್ತವಾಂಶಗಳನ್ನು ತಿಳಿದುಕೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು. ಜಿಲ್ಲೆಯ ಬೈಲಹೊಂಗಲ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ನಡೆಸಿತು