ಡಾ.ಶಿವಾನಂದ ಭಾರತಿ ಶ್ರೀಗಳ ವರ್ಧಂತಿ ಮಹೋತ್ಸವಬೈಲಹೊಂಗಲ ಸಮೀಪದ ಸುಕ್ಷೇತ್ರ ಇಂಚಲ ಗ್ರಾಮದ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದಲ್ಲಿ ಡಾ.ಶಿವಾನಂದ ಭಾರತಿ ಮಹಾಸ್ವಾಮಿಗಳ 85ನೇ ವರ್ಷದ ವರ್ಧಂತಿ ಮಹೋತ್ಸವ, ಶ್ರೀಗಳ 55ನೇ ವರ್ಷದ ಪೀಠಾರೋಹಣ ಹಾಗೂ 55ನೇ ವರ್ಷದ ಅಖಿಲ ಭಾರತ ವೇದಾಂತ ಪರಿಷತ್, ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ 50ನೇ ವರ್ಷದ ಸುವರ್ಣ ಮಹೋತ್ಸವ ಡಿ.28 ರಿಂದ ಜ.2ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು