ಗಾಂಧಿ ಭಾರತ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿ ಸುರ್ಜೆವಾಲಾಬೆಳಗಾವಿ ನಗರದ ಸಿ.ಪಿ.ಎಡ್ ಮೈದಾನದಲ್ಲಿ ಡಿ.26, 27 ರಂದು ನಡೆಯುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.