ಹುಬ್ಬಳ್ಳಿ ಗಲಭೆ ಪ್ರಕರಣ ಹಿಂದಕ್ಕೆ ಪಡೆದ ನಿರ್ಣಯ ಖಂಡಿಸಿ ಪ್ರತಿಭಟನೆಕನ್ನಡಪ್ರಭ ವಾರ್ತೆ ಬೆಳಗಾವಿ ಹಳೆ ಹುಬ್ಬಳ್ಳಿ ಗಲಭೆ, ಪೊಲೀಸರ ಮೇಲಿನ ದಾಳಿ ಪ್ರಕರಣ ರಾಜ್ಯ ಸರ್ಕಾರ ಹಿಂಪಡೆದು ಆರೋಪಿಗಳನ್ನು ಮುಕ್ತಗೊಳಿಸುತ್ತಿರುವ ಕ್ರಮ ಖಂಡಿಸಿ ಬೆಳಗಾವಿಯ ವಿವಿಧ ಸಮಾಜದ ಪ್ರಮುಖರು, ಗಣ್ಯರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮತ್ತು ವಿವಿಧ ಸಂಘಟನೆಯ ಪದಾಧಿಕಾರಿಗಳು, ನಾಗರಿಕ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲ ಅವರಿಗೆ ಮನವಿ ಸಲ್ಲಿಸಿದರು.