ಇಂದು ಉತ್ಸವಕ್ಕೆ ತೆರೆ, ಸಮಾರೋಪಕ್ಕೆ ನಾಡ ದೊರೆಕಳೆದೆರಡು ದಿನಗಳಿಂದ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವ ಮತ್ತು ಚನ್ನಮ್ಮನ 200ನೇ ವಿಜಯೋತ್ಸವದ ಸಮಾರೋಪ ಸಮಾರಂಭಕ್ಕೆ ಶುಕ್ರವಾರ ತೆರೆ ಬೀಳುತ್ತಿದೆ. ಇದೆ ವೇಳೆ ಸಮಾರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಗಮಿಸುತ್ತಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದಿದೆ.