ಡಾ.ಸ್ವಾಮಿನಾಥನ್ ಆಯೋಗ ವರದಿ ಜಾರಿಗೆ ಆಗ್ರಹರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ದರ ದೊರಕಿಸಿಕೊಡುವಲ್ಲಿ ಡಾ.ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕು, ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಂದ ತಿದ್ದುಪಡಿ ರದ್ದುಗೊಳಿಸಬೇಕು. ರೈತರ ಸಂಪೂರ್ಣ ಸಾಲಮನ್ನಾ, ರೈತರ ಸಾಲ ವಸೂಲಾತಿ ಪ್ರಕ್ರಿಯೆ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ನೇತೃತ್ವದಲ್ಲಿ ಸಹಸ್ರಾರು ರೈತರು ಸೋಮವಾರ ಸುವರ್ಣಸೌಧ ಗಾರ್ಡನ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.