ಪಂಚಗ್ಯಾರಂಟಿ ಸಮರ್ಪಕ ಅನುಷ್ಠಾನಕ್ಕೆ ಕೈಜೋಡಿಸಿಸ್ಥಳೀಯ ಸಚಿವರು, ಜನಪ್ರತಿನಿಧಿಗಳ ಸಹಯೋಗದಲ್ಲಿ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ. ಇದರಿಂದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ರಾಜ್ಯ, ರಾಷ್ಟ್ರಕ್ಕೆ ಮಾದರಿ ಸಂದೇಶ ಹೋಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.