ಗ್ಯಾರಂಟಿ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹಾದಿಯಲ್ಲಿ ದೃಢವಾದ ಹೆಜ್ಜೆ ಇಟ್ಟಿದೆ. ಜನರಿಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.