ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಯ 3ನೇ ಶಾಖೆ ಉದ್ಘಾಟನೆ40 ವರ್ಷಗಳಿಂದ ಸಹಕಾರ, ಸಾಮಾಜಿಕ, ರಾಜಕೀಯ ಚಟುವಟಿಕೆಗಳ ಮೂಲಕ ಈ ಭಾಗದ ಜನರ ಸೇವೆ ಮಾಡುತ್ತ ಬಂದಿದ್ದೇನೆ. ಮುಂದುವರಿದ ಭಾಗವಾಗಿ ಸೇವೆಯನ್ನು ಇನ್ನಷ್ಟು ನಿಕಟಗೊಳಿಸುವ ಹಂಬಲದೊಂದಿಗೆ ಯಾದವಾಡ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ 3ನೇ ಶಾಖೆ ಪ್ರಾರಂಭಿಸುತ್ತಿದ್ದೇವೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.