ಒಗ್ಗಟ್ಟಿನಿಂದ ಕೆಲಸ ಮಾಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಲಕ್ಷ್ಮಣ ಸವದಿ ಸಲಹೆನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ಸಮನ್ವಯತೆಯಿಂದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿ ಅನುಷ್ಠಾನಗೊಳಿಸಬೇಕು. ಶಾಸಕನಾಗಿ ನಾನು ಕೂಡ ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪಟ್ಟಣದ ಸೌಂದರ್ಯ, ಜೋಡಿ ಕೆರೆಗಳ ಅಭಿವೃದ್ಧಿ, ಪುರಸಭೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.