ಕನ್ನಡಪರ ಹೋರಾಟ, ಸಂಘಟನೆ ಬಲವರ್ಧನೆಗೆ ಆದ್ಯತೆ ನೀಡಿಕರ್ನಾಟಕ ರಕ್ಷಣಾ ವೇದಿಕೆಯು ಸಂಸ್ಥಾಪಕ ಅಧ್ಯಕ್ಷ ಎಚ್.ಶಿವರಾಮೇಗೌಡರ ನೇತೃತ್ವದಲ್ಲಿ ರಾಜ್ಯದಲ್ಲಿ ಹೆಮ್ಮರವಾಗಿ ಬೆಳೆದಿದೆ. ಅವರ ಮಾರ್ಗದರ್ಶನದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕನ್ನಡಪರ ಹೋರಾಟ, ಕಾರ್ಯಕರ್ತರ ಸಮಾವೇಶ, ಕನ್ನಡಪರ ಕಾರ್ಯಕ್ರಮ ನಿರಂತರವಾಗಿ ಏರ್ಪಡಿಸುತ್ತಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಕರವೇ ಸಂಘಟನೆ ಬಲವರ್ಧನೆಗೆ ಒತ್ತು ನೀಡಲಾಗಿದ್ದು, ನೂತನ ಪದಾಧಿಕಾರಿಗಳು ಸಂಘಟನೆಗೆ ಇನ್ನಷ್ಟು ಶಕ್ತಿ ತುಂಬುವ ಮೂಲಕ ಸಮರ್ಥವಾಗಿ ಮುನ್ನಡಿಸಬೇಕು ಎಂದು ಬೆಳಗಾವಿ ಕರವೇ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಡಿ ಹೇಳಿದರು.