ಭವಿಷ್ಯದಲ್ಲಿ ಸ್ಥಳೀಯ ಪ್ರವಾಸೋದ್ಯಮಕ್ಕೆ ಪಾಮುಖ್ಯತೆ: ಶಾಸಕ ಆಸೀಫ್ ಸೇಠ್ಪ್ರವಾಸೋದ್ಯಮ ದೇಶದ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಅನೇಕ ದೇಶಗಳ ಆರ್ಥಿಕತೆ ಪ್ರವಾಸೋದ್ಯಮವನ್ನೇ ಅವಲಂಬಿಸಿದೆ. ಪ್ರವಾಸೋದ್ಯಮ ನಿಧಾನವಾಗಿ ಬದಲಾಗುತ್ತಿದ್ದು, ಈಚೆಗೆ ಜನರು ಸ್ಥಳೀಯ ಪ್ರವಾಸಿ ತಾಣಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈ ಬೆಳವಣಿಗೆಯಿಂದ ಭವಿಷ್ಯದಲ್ಲಿ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಹೇಳಿದರು.