16 ರಂದು ಗಂಗಾರತಿ ಮಾದರಿಯಲ್ಲಿ ಕೃಷ್ಣಾರತಿನಮ್ಮೆಲ್ಲರ ಜೀವನಾಡಿ ಕೃಷ್ಣಾ ನದಿಯು ಗಂಗಾ ನದಿಯಷ್ಟೇ ಪವಿತ್ರವಾದದ್ದು, ನದಿಗಳು ಕೂಡ ದೇಶದ ಅಮೂಲ್ಯವಾದ ಸಂಪತ್ತು, ನದಿ ನೀರು ಕಲುಷಿತವಾಗದಂತೆ ಸಂರಕ್ಷಣೆ ಮಾಡುವುದು ಮತ್ತು ವ್ಯರ್ಥವಾಗಿ ಹರಿದು ಹೋಗುವ ನೀರನ್ನು ನೀರಾವರಿ ಯೋಜನೆಗಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಿರಾಣಿ ಉದ್ಯೋಗ ಸಮೂಹದ ಕಾರ್ಯ ನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ ಹೇಳಿದರು.