ಹೂ, ಹಣ್ಣು ಖಾಸಗಿ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರಿಸಲು ಆಗ್ರಹಬೆಳಗಾವಿ ನಗರದಲ್ಲಿರುವ ಹೂ, ಹಣ್ಣು ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ ನೇತೃತ್ವದಲ್ಲಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.