ಹೆಬ್ಬಾಳಕರ, ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು, ಬೆಳಗಾವಿ ತಹಸೀಲ್ದಾರ ಬಸವರಾಜ ನಾಗರಾಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.