ಕಾಂಗ್ರೆಸ್ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ?: ಕೂಡಲ ಸ್ವಾಮೀಜಿ2ಎ ಮೀಸಲಾತಿ ನೀಡಬೇಕೆಂದು ಪಂಚಮಸಾಲಿ ಸಮಾಜದ ಹೋರಾಟ ಸಂವಿಧಾನ ವಿರೋಧಿ, ಕಾನೂನು ಬಾಹಿರವಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ನಮ್ಮ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹೋರಾಟ ಸಂವಿಧಾನ ವಿರೋಧಿ, ಕಾನೂನು ವಿರೋಧಿಯಾಗಿದ್ದರೆ ಹೋರಾಟದಲ್ಲಿ ಭಾಗಿಯಾದ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದರು.