ಒತ್ತುವರಿಯಾಗಿರುವ ವಕ್ಫ್ ಆಸ್ತಿ ವಾಪಸ್ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ದೇವಸ್ಥಾನ ಹಾಗೂ ರೈತರ ಜಮೀನನ್ನು ನಾವು ಮುಟ್ಟುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆದು ಮುಖ್ಯಮಂತ್ರಿಗಳಿಗೆ ನೀಡುವುದು ಹಾಗೂ ಹೊಸ ಮೋಟಾರು ಬೈಕ್‌ಗಳಿಗೆ 500 ರು, ಕಾರುಗಳಿಗೆ 1,000 ರು. ಹೆಚ್ಚುವರಿ ಕರ ವಿಧಿಸಲು ಪ್ರಸ್ತಾಪಿಸಿರುವ ವಿಧೇಯಕ ಸೇರಿ ಒಟ್ಟು 11 ವಿಧೇಯಕಗಳನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.