ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಜ್ಜಾಗಿನೆರೆಯ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ನದಿಗಳ ಒಳಹರಿವು ಹೆಚ್ಚಾಗುತ್ತಿದೆ. ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಸಂಭವಿಸಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.