ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಬಂಧಿ, ನಟ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲೇ ತಮಗೂ ಬೀಡಿ, ಸಿಗರೇಟ್ ಹಾಗೂ ತಂಬಾಕು ನೀಡುವಂತೆ ನಗರದ ಹಿಂಡಲಗಾ ಕಾರಾಗೃಹದಲ್ಲಿ ಭಾನುವಾರ ಕೈದಿಗಳು ಪ್ರತಿಭಟನೆ ನಡೆಸಿದರು.