ದಲ್ಲೆವಾಲ್ ಸತ್ಯಾಗ್ರಹ ಬೆಂಬಲಿಸಿ ಡಿ.6 ರಿಂದ ಉಪವಾಸ ಸತ್ಯಾಗ್ರಹದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಡಿ.6 ರಿಂದ ಬೆಂಗಳೂರಿನ ಸ್ವಾತಂತ್ರ್ಯಉದ್ಯಾನದಲ್ಲಿ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ದಕ್ಷಿಣ ಭಾರತ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಹೇಳಿದರು.