ಕಪಿಚೇಷ್ಟೆಗೆ ಬೆಚ್ಚಿಬಿದ್ದ ಕಾಗವಾಡ ಜನತೆಕನ್ನಡಪ್ರಭ ವಾರ್ತೆ ಕಾಗವಾಡ ಪಟ್ಟಣದಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಕಪಿಚೇಷ್ಟಿಯಿಂದ ಶಾಲಾ ಮಕ್ಕಳು, ಮಹಿಳೆಯರು, ವಯೋವೃದ್ಧರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದು, ಹೊರಗೆ ಬರಲು ಹೆದರುತ್ತಿದ್ದಾರೆ. ಬೆಳಗ್ಗೆ ಆಯಿತೆಂದರೆ ಕೋತಿಗಳ ಕಾಟದ್ದೇ ಚಿಂತೆ ಜನರನ್ನು ಕಾಡುತ್ತಿದೆ. ಶಾಲಾ ಮಕ್ಕಳ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸುತ್ತಿವೆ. ಹೆದರಿ ಮಕ್ಕಳು ಕಿರುತ್ತ ಓಡಿದರೆ ಅವರ ಮೇಲೆ ದಾಳಿ ನಡೆಸುತ್ತವೆ. ಪ್ರತಿನಿತ್ಯ ಮಕ್ಕಳನ್ನು ಶಾಲೆಗೆ ಬಿಡುವುದು ಮಹಿಳೆಯರಿಗೆ ದೊಡ್ಡ ಸಮಸ್ಯೆಯಾಗಿದೆ.