ಬೈಲಹೊಂಗಲ, ಸೊಗಲ, ಸವದತ್ತಿ ಮಾರ್ಗವಾಗಿ ಹೊಸ ರೈಲ್ವೆ ಮಾರ್ಗ ರಚಿಸಿಬೆಳಗಾವಿ-ಬೈಲಹೊಂಗಲ-ಸೊಗಲ-ಸವದತ್ತಿ ಮಾರ್ಗವಾಗಿ ಧಾರವಾಡ ಸಂಪರ್ಕ ಹೊಂದುವ ಹೊಸ ರೈಲ್ವೆ ಮಾರ್ಗ ರಚಿಸುವಂತೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಮಹಾರಾಷ್ಟ್ರದಿಂದ ಸೋಗಲ ಶ್ರೀಕ್ಷೇತ್ರ ಮತ್ತು ರೇಣುಕಾ ಯಲ್ಲಮ್ಮ ಕ್ಷೇತ್ರಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಹಾಗೂ ಈ ಭಾಗದ ಸರಕು ಸಾಗಾಣಿಕೆಗೆ ಆದ್ಯತೆ ನೀಡಲು, ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಈ ಮಾರ್ಗ ಅತ್ಯವಶ್ಯಕವಾಗಿದೆ. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ನೈಋತ್ಯ ರೈಲ್ವೆ ವಿಭಾಗದ ಡಿಆರ್‌ಯುಸಿಸಿ ಸದಸ್ಯ ಎಫ್.ಎಸ್.ಸಿದ್ದನಗೌಡ ರೈಲ್ವೆ ಸಲಹಾ ಮಂಡಳಿ ಸಭೆಯಲ್ಲಿ ಆಗ್ರಹಿಸಿದರು.