ಪ್ರವಾಹದ ಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಿಕನ್ನಡಪ್ರಭ ವಾರ್ತೆ ಗೋಕಾಕ ಘಟಪ್ರಭಾ ನದಿಯ ಪ್ರವಾಹದಿಂದ ಭಾಗಶಃ ಹಾನಿಯಾಗಿರುವ ರೈತರ ಬೆಳೆಗಳನ್ನು ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಮೆಳವಂಕಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಶಾಸಕರು, ಈ ಪ್ರವಾಹ ಪೀಡಿತ ಸಮೀಕ್ಷೆಯಲ್ಲಿ ಅರ್ಹರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.