ಗಣೇಶಮೂರ್ತಿ ಮೆರವಣಿಗೆಯಲ್ಲಿ ಚಾಕು ಇರಿತ: ನಾಲ್ವರಿಗೆ ಗಾಯನಗರದ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ತಡ ರಾತ್ರಿ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಅಪರಿಚಿತರ ಗುಂಪೊಂದು ಯುವಕರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದು, ಮೂವರು ಯುವಕರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಬೆಳಗಾವಿಯಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.