ನಶಾ ಮುಕ್ತ ನಗರವನ್ನಾಗಿಸಲು ಕ್ರಮಬೆಳಗಾವಿ ಪತ್ರಕರ್ತರ ಸಂಘದಿಂದ ನಗರದ ವಾರ್ತಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬ್‌ರಾವ್ ಬೊರಸೆ ಅವರು ನಗರದ ಸಂಚಾರ ಸಮಸ್ಯೆ ನಿವಾರಣೆ, ಸೈಬರ್ ಅಪರಾಧಗಳ ನಿಯಂತ್ರಣ, ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಹಾವಳಿಗೆ ಕಡಿವಾಣ ಸೇರಿದಂತೆ ಇಲಾಖೆಯಲ್ಲಿರುವ ಸಮಸ್ಯೆಗಳ ಕುರಿತು ತಮ್ಮ ಕಾರ್ಯಯೋಜನೆ ಹಾಗೂ ಕ್ರಮಗಳ ಬಗ್ಗೆ ತೆರೆದಿಟ್ಟಿದ್ದಾರೆ.