ಮೈಸೂರು ಪಾದಯಾತ್ರೆ ಹಿಂದೆ ಒಳ ಒಪ್ಪಂದ ರಾಜಕಾರಣ: ಶಾಸಕ ಯತ್ನಾಳಬಿಜೆಪಿ ಮುಖಂಡರು ಬೆಂಗಳೂರಿನಿಂದ ಮೈಸೂರಿಗೆ ಹೊರಟ ಪಾದಯಾತ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧವಲ್ಲ, ಬದಲಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಒಳಒಪ್ಪಂದ ಭಾಗವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಪಕ್ಷದ ನಾಯಕರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ್ದಾರೆ.