ಬೆಳಗಾವಿಯಲ್ಲಿ ಮುಂದುವರಿದ ಮಳೆಕನ್ನಡಪ್ರಭ ವಾರ್ತೆ ಬೆಳಗಾವಿ ಮಹಾರಾಷ್ಟ್ರದ ಮಳೆ ಅಬ್ಬರದಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ, ದೂಧಗಂಗಾ,ವೇದಗಂಗಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿವೆ. ಈ ಭಾಗದ 23 ಸೇತುವೆ ಮುಳುಗಡೆಯಾಗಿವೆ. 44 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದ್ದು, ಬಸವನ ಕುಡಚಿ ಗ್ರಾಮದ 10ಕ್ಕೂ ಹೆಚ್ಚು ಮನೆಗಳಿಗೆ ಹಾಗೂ ಕೆಎಲ್‌ಇ ವೆಲ್‌ನೆಸ್ ಸೆಂಟರ್‌ಗೆ ನೀರು ನುಗ್ಗಿದೆ. ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿವೆ.