ವರುಣನ ರುದ್ರನರ್ತನ: ಕಾಡಂಚಿನ ಜನ ಹೈರಾಣಖಾನಾಪುರ ತಾಲೂಕಿನ ಅರಣ್ಯಪ್ರದೇಶದಲ್ಲಿ ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಸತತ ಧಾರೆಯಿಂದಾಗಿ ಗುಂಜಿ, ಲೋಂಡಾ, ಹೆಮ್ಮಡಗಾ, ನೇರಸೆ, ನೀಲಾವಡೆ, ಜಾಂಬೋಟಿ ಮತ್ತು ಕಣಕುಂಬಿ ಅರಣ್ಯಪ್ರದೇಶದ ಕಾಡಿನ ವಾಸಿಗಳ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾಡಂಚಿನ 30ಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ತಾಲೂಕಿನ ಹಲವು ಗ್ರಾಮಗಳು ಮುಖ್ಯ ವಾಹಿನಿಯಿಂದ ಸಂಪರ್ಕ ಕಡಿದುಕೊಂಡು ನಡುಗಡ್ಡೆಯಾಗಿವೆ.