ರಾವಸಾಹೇಬ ಪಾಟೀಲ ಕುಟುಂಬಕ್ಕೆ ಸಚಿವರ ಸಾಂತ್ವನಇತ್ತೀಚೆಗೆ ನಿಧನರಾದ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಧಾರ್ಮಿಕ, ಸಹಕಾರಿ ಕ್ಷೇತ್ರದ ಹಿರಿಯ ನಾಯಕ, ಸಹಕಾರಿ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ರಾವಸಾಹೇಬ ಪಾಟೀಲ ಮನೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.