ಅಂಗನವಾಡಿಯಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಕನ್ನಡಪ್ರಭ ವಾರ್ತೆ ಬೆಳಗಾವಿ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿ ಗವರ್ನಮೆಂಟ್ ಮಾಂಟೆಸ್ಸರಿ ಮಾಡಲು ನಿರ್ಧರಿಸಲಾಗಿದ್ದು, ಅಂಗನವಾಡಿಗಳ ಪುನಶ್ಚೇತನಕ್ಕೆ ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಶುಕ್ರವಾರ ಅಂಗನವಾಡಿ ಶಿಕ್ಷಕರಿಗೆ ಮೊಬೈಲ್, ಸೀರೆ, ಮೆಡಿಸಿನ್ ಕಿಟ್, ವೇಯಿಂಗ್ ಮಷಿನ್‌ಗಳನ್ನು ವಿತರಿಸಿ ಮಾತನಾಡಿದರು.