• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ
ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಗ್ಯಾರಂಟಿ ಹೆಸರಲ್ಲಿ ಬಡವರ ರಕ್ತ ಹೀರುತ್ತಿರುವ ಸಿಎಂ, ಡಿಸಿಎಂ
ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಬಡವರ ರಕ್ತವನ್ನು ತಿಗಣೆ ರೀತಿಯಲ್ಲಿ ಹೀರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರವಾಹ ಎದುರಿಸಲು ಅಧಿಕಾರಿಗಳು ಸಿದ್ದರಾಗಿ
ಕನ್ನಡಪ್ರಭ ವಾರ್ತೆ ರಾಮದುರ್ಗ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಭಾರಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮ ಜಲಾಶಯಗಳ ನೀರಿನ ಮಟ್ಟ ಹೆಚ್ಚಿ ಪ್ರವಾಹದಿಂದ ಜನ ಜಾನುವಾರಗಳಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ನಿರ್ದೇಶನ ನೀಡಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕೇಸ್‌ ಹಾಕಿದರೆ ಸಹಿಸಲ್ಲ
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಗುಡುಗಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ ಎಂಬ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳೇ ನನ್ನ ಗಮನಕ್ಕೆ ತಂದಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದರೇ ಮುಂದಾಗುವ ಅನಾಹುತಗಳಿಗೆ ಪೊಲೀಸ್‌ ಇಲಾಖೆಯೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ
ಕನ್ನಡಪ್ರಭ ವಾರ್ತೆ ಅಥಣಿ ಶೇಡಬಾಳ-ವಿಜಯಪುರ ರೈಲ್ವೆ ಮಾರ್ಗ ಅನುಷ್ಠಾನದ ಕುರಿತು ಪುನರ್ ಪರಿಶೀಲಿಸಿ ಸಂಸತ್ ಅಧಿವೇಶನದಲ್ಲಿ ಚರ್ಚಿಸುವ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇನೆ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಮೂಲಕ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭರವಸೆ ನೀಡಿದರು.
ದಕ್ಷಿಣ ಭಾರತ ಜೈನಸಭಾದ ಅಧ್ಯಕ್ಷ ರಾವಸಾಹೇಬ ಇನ್ನಿಲ್ಲ
ಕನ್ನಡಪ್ರಭ ವಾರ್ತೆ ಬೆಳಗಾವಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತ ಜೈನಸಭಾದ ಅಧ್ಯಕ್ಷ, ಖ್ಯಾತ ಉದ್ಯಮಿ, ಸಹಕಾರಿ ಧುರೀಣ ರಾವಸಾಹೇಬ ಪಾಟೀಲ (83) ಮಂಗಳವಾರ ನಿಧನರಾದರು. ಮೃತರಿಗೆ ಪತ್ನಿ ಮೀನಾಕ್ಷಿ, ಪುತ್ರ ಅಭಿನಂದನ್, ಯುವ ಮುಖಂಡ ಉತ್ತಮ ಪಾಟೀಲ ಮತ್ತು ಪುತ್ರಿ ದೀಪಾಲಿ, ಸಹೋದರ, ಅಳಿಯ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಸುಳ್ಳು ಪ್ರಕರಣ ದಾಖಲಿಸಿದ ದೂರುದಾರರೇ ಅಪರಾಧಿಗಳು
ಕನ್ನಡಪ್ರಭ ವಾರ್ತೆ ಬೆಳಗಾವಿ ಸುಳ್ಳು ಪ್ರಕರಣ ದಾಖಲಿಸಿದ ದೂರುದಾರರೇ ಅಪರಾಧಿಗಳಾಗಿರುವ ವಿಶೇಷ ಪ್ರಕರಣ ಬೆಳಗಾವಿಯಲ್ಲಿ ನಡೆದಿದ್ದು, ಸುಳ್ಳು ಪ್ರಕರಣದಲ್ಲಿ ಭಾಗಿಯಾದ 13 ಜನರ ವಿರುದ್ಧದ ಆರೋಪ ಸಾಭಿತಾಗಿದೆ ಎಂದು ಮಂಗಳವಾರ ವಿಚಾರಣೆ ನಡೆಸಿದ ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ಪ್ರಮಾಣವನ್ನು ಜೂನ್‌ 27ಕ್ಕೆ ಕಾಯ್ದಿರಿಸಿ ಆದೇಶ ನೀಡಿದೆ. ಈ ತೀರ್ಪಿನಿಂದ ಮೇಲಾಧಿಕಾರಿಗಳು ಸೇರಿದಂತೆ ಇತರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವವರಿಗೆ ಎಚ್ಚರಿಕೆ ಸಂದೇಶವೂ ಆಗಿದೆ.
ಸರಿಯಾಗಿ ಕೆಲಸ ಮಾಡಿ, ಇಲ್ಲ ಮನೆಗೆ ಹೋಗಿ
ಕನ್ನಡಪ್ರಭ ವಾರ್ತೆ ಕಾಗವಾಡ: ಕಾಗವಾಡ ಮತಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಹೊಟೇಲ್, ಪಾನ್‌ ಶಾಪ್‌ಗಳಲ್ಲಿ ಮಹಾರಾಷ್ಟ್ರದ ಸಾರಾಯಿಯನ್ನು ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದ್ದು, ಅದನ್ನು ತಡೆಯಲು ಅಬಕಾರಿ ಇಲಾಖೆಯ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ನೀವೇ ಅಕ್ರಮ ಮಾರಾಟಗಾರರಿಗೆ ಮಾಹಿತಿ ನೀಡಿ, ಅವರನ್ನು ಬಚಾವ್ ಮಾಡುತ್ತಿದ್ದೀರಿ, ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.
ಸ್ಥಳೀಯ ಚುನಾವಣೆಗೆ ಸಿದ್ಧರಾಗಿ: ಅಣ್ಣಾಸಾಹೇಬ ಜೊಲ್ಲೆ ಕರೆ
ಕನ್ನಡಪ್ರಭ ವಾರ್ತೆ ರಾಯಬಾಗ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ತಮಗೆ ವಹಿಸಿಕೊಟ್ಟ ಜವಾಬ್ದಾರಿಗಳನ್ನು ಉತ್ತಮವಾಗಿ, ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಅಕ್ರಮ ಮಣ್ಣು ಮಾರಾಟದ ಆರೋಪ ಸುಳ್ಳು
ಕನ್ನಡಪ್ರಭ ವಾರ್ತೆ ಕಾಗವಾಡ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಜಲ ಜೀವನ ಮೀಷನ್ ಕಾಮಗಾರಿಯಲ್ಲಿನ ಮಣ್ಣಿಗೆ ಕನ್ನ ಹಾಕಿದ್ದಾರೆಂದು ಕೆಲ ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಜುಗೂಳ ಗ್ರಾಪಂ ಅಧ್ಯಕ್ಷ ಕಾಕಾ ಪಾಟೀಲ ಸ್ಪಷ್ಟನೆ ನೀಡಿದ್ದಾರೆ.ಜುಗೂಳ ಗ್ರಾಮ ಪಂಚಾಯತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮಕ್ಕೆ ಜಲ ಜೀವನ ಮೀಷನ್ ಯೋಜನೆಯಡಿಯಲ್ಲಿ ಓವ್ಹರ್ ಹೆಡ್ ಟ್ಯಾಂಕ್ ಕಟ್ಟಬೇಕಾಗಿತ್ತು. ಆದರೆ, ಅದನ್ನು ನಿರ್ಮಿಸಲು ಗ್ರಾಮದಲ್ಲಿ ಸರ್ಕಾರಿ ಜಮೀನು ಇಲ್ಲದ ಕಾರಣ ಗ್ರಾಮದ ಸಂದೇಶ ಕುಮಠಳ್ಳಿಯವರ ಜಮೀನಿನಲ್ಲಿ ಬಾಡಿಗೆ (ಲಿಜ್) ಮೂಲಕ ಪಡೆದು ಟ್ಯಾಂಕ್‌ ನಿರ್ಮಾಣ ಮಾಡಲಾಗುತ್ತಿದೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved