ಮಂಜೂರು ಕಾಮಕಾರಿಗಳನ್ನು ತ್ವರಿತವಾಗಿ ಆರಂಭಿಸಿಕನ್ನಡಪ್ರಭ ವಾರ್ತೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ, ರಿಂಗ್ ರಸ್ತೆ, ಘನತ್ಯಾಜ್ಯ ನಿರ್ವಹಣಾ ಘಟಕ, ನಿರಂತರ ನೀರು ಸರಬರಾಜು ಸೇರಿದಂತೆ ಈಗಾಗಲೇ ಜಿಲ್ಲೆಗೆ ಮಂಜೂರಾಗಿರುವ ಬೃಹತ್ ಯೋಜನೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸೌಕರ್ಯ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.