ಡಿಸಿಎಂ ಹುದ್ದೆ ಕೇಳಿಲ್ಲ, ಬೇಡಿಕೆ ಇಟ್ಟಿಲ್ಲಕನ್ನಡಪ್ರಭ ವಾರ್ತೆ ಬೆಳಗಾವಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಪ್ರಸ್ತುತ ಅವಶ್ಯಕತೆ ಇಲ್ಲ. ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ. ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮೊದಲು ಡಿಸಿಎಂ ಹುದ್ದೆ ಕೇಳಿದ್ದೇವು. ಆದರೆ, ಈಗ ಡಿಸಿಎಂ ಹುದ್ದೆ ಅವಶ್ಯಕತೆ ಇಲ್ಲ.